ಬೆಂಗಳೂರು : ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೂವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿ ಈ ಒಂದು ಭೀಕರ ಅಗ್ನಿವಗಳ ಸಂಭವಿಸಿತ್ತು.
ಮೃತರನ್ನು ಸಿದ್ದರಾಜು (55) ಪತ್ನಿ ಚಂದ್ರಮ್ಮ (50) ಹಾಗೂ ಪುತ್ರ ಪ್ರಶಾಂತ್ (22) ಮೃತರು ಎಂದು ತಿಳಿದು ಬಂದಿದೆ. ಇವರು ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ನಿವಾಸಿಗಳು ಆಗಿದ್ದು, ಅಮರನಾರಾಯಣ ಬ್ಲಾಕ್ ನಲ್ಲಿ ಈ ಒಂದು ದುರಂತ ಸಂಭವಿಸಿತ್ತು.
ಘಟನೆಯ ಹಿನ್ನೆಲೆ
ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದ ಅಮರ ನಾರಾಯಣ ಬ್ಲಾಕ್ ನ ಮನೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿತ್ತು. ಈ ಘಟನೆಯಲ್ಲಿ ಕುಟುಂಬದ ಸದಸ್ಯರು ತೀವ್ರವಾಗಿ ಸುಟ್ಟಗಾಯಗಳಿಗೆ ಒಳಗಾಗಿದ್ದರು.ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇಂದು ಚಿಕಿತ್ಸೆಗೆ ಸ್ಪಂದಿಸದೆ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.








