ಶಿವಮೊಗ್ಗ : ಅಡುಗೆ ಮಾಡುತ್ತಿದ್ದಾಗ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಶಿವಮೊಗ್ಗದ ಕೋಟೆ ಗಂಗೂರಿನ ಮಂಡಿ ಬಡಾವಣೆಯಲ್ಲಿ ಈ ಒಂದು ಭೀಕರ ಅಗ್ನಿ ದುರಂತ ಅವಘಡವಿಸಿದೆ.
ಬೈಲಪ್ಪ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಬೈಲಪ್ಪ ಕುಟುಂಬಸ್ಥರು ಕೂಡಲೇ ಮನೆಯಿಂದ ಹೊರಬಂದ ತಕ್ಷಣ ಸಿಲಿಂಡರ್ ಸ್ಫೋಟಗೊಂಡಿದೆ. ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಮನೆ ಗೋಡೆಗಳಲ್ಲಿ ಬಿರುಕು ಮೂಡಿದೆ.
ಅಲ್ಲದೇ ಸ್ಫೋಟದ ತೀವ್ರತೆಗೆ ಮೇಲ್ಚಾವಣಿ ಹಾರಿಹೋಗಿದೆ. ಮನೆಯಲ್ಲಿದ್ದ ಬಟ್ಟೆ ದವಸ ಧಾನ್ಯ ಮತ್ತಿತರ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕತಾಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.