ಹಾಸನ : ಮನೆಯಲ್ಲಿ ಅಡುಗೆ ಮಾಡುವಾಗ ಅನೀಲ ಸೋರಿಕೆಯಾಗಿ ಅವಘಡ ಸಂಭವಿಸಿದ್ದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೇಂಟಗೆರೆಯಲ್ಲಿ ಈ ಒಂದು ದುರಂತ ಸಂಭವಿಸಿದೆ. ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿವೆ. ದೊಡ್ಡೇಗೌಡ ಎಂಬ ವರ ಮನೆಯಲ್ಲಿ ಕಾರ್ಮಿಕರು ವಾಸವಿದ್ದರು.
ಮನೆಯಲ್ಲಿದ್ದ ಅಲೀಮ್ ಬೇಗಮ್ (23) ರೋಹಿತ್ ಕಥನ್ (19) ಇಸ್ತರ್ ಉಲ್ಲಾ (23) ಹಾಗೂ ಅಹಿಸ್ಲಂ (25) ಎಂಬವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಳುಗಳನ್ನು ಅರಕಲಗೂಡು ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.







