ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೋಡಿಹಳ್ಳಿ ಬಳಿ ನಡೆದಿದೆ.
ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೋಡಿಹಳ್ಳಿ ಬಳಿ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡಲಾಗಿ ಬಿದ್ದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ತರೀಕೆರೆ ಎಸಿ ಭೇಟಿ ನೀಡಿದ್ದಾರೆ. ಗ್ಯಾಸ್ ಸೋರಿಕೆ ತಡೆಗಟ್ಟಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.