ಬೆಂಗಳೂರು : ಜೂನ್ 14ರಿಂದ 24ರ ವರೆಗೆ ಜಿಬಿಎ ಚುನಾವಣೆ ಫಿಕ್ಸ್ ಮಾಡುವಂತೆ ಜಿಬಿಎ ಸೂಚಿಸಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ತಿಳಿಸಿದ್ದು, GBA ಚುನಾವಣೆ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಚುನಾವಣೆಗೆ ಸಂಬಂಧಪಟ್ಟ ಪ್ರಕ್ರಿಯೆ ಮುಗಿಸಿದ್ದೇವೆ. ಮಳೆ ಮತ್ತು ಶಾಲೆ ಕಾಲೇಜು ಸ್ಯಾನ್ಸನ್ ಗಮನಿಸಿ ದಿನಾಂಕ ನಿಗದಿ ಆಗಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ಮಾಹಿತಿ ಹಂಚಿಕೊಂಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂನ್ 14ರಿಂದ ಜೂನ್ 24ರ ಒಳಗಾಗಿ ಒಂದು ಡೇಟ್ ಹೇಳಲು ಸೂಚನೆ ನೀಡಿದ್ದೇವೆ ಒಂದು ದಿನಾಂಕ ಹೇಳಿ ಅಂತ ಸೂಚನೆ ಕೊಟ್ಟಿದ್ದೇವೆ. ಈ ಅಂತರದಲ್ಲಿಯೇ GBA ಚುನಾವಣೆ ದಿನಾಂಕ ಘೋಷಣೆ ಆಗಬೇಕು ಕೆಲವೇ ದಿನಗಳಲ್ಲಿ ಜಿಬಿಎ ಚುನಾವಣೆಗೆ ಅಂತಿಮ ದಿನಾಂಕ ತಿಳಿಸುತ್ತೇವೆ. ಮುಂದೂಡಿಕೆ ಮಾಡುವ ಅಧಿಕಾರ ಸುಪ್ರೀಂ ಕೋರ್ಟ್ ಗೆ ಮಾತ್ರ ಇದೆ. ಜೂನ್ 30ರ ಒಳಗಾಗಿ ಜಿಬಿಎ ಚುನಾವಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ ನಿಗದಿತ ಕಾಳಮಿತಿಯಲ್ಲಿ ಚುನಾವಣೆ ಮುಗಿಸಿ ನಾವು ವರದಿ ಕೊಡಬೇಕು ಸುಪ್ರೀಂಕೋರ್ಟ್ ನಿರ್ದೇಶನದ ಪ್ರಕಾರ ನಾವು ನಡೆಯಬೇಕಾಗುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೆಶಿ ಹೇಳಿಕೆ ನೀಡಿದರು.
ಸಿದ್ಧತೆಗಳು ಪೂರ್ಣ: ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಯೋಗವು ತನ್ನ ಎಲ್ಲಾ ಆಂತರಿಕ ತಯಾರಿಗಳನ್ನು ಈಗಾಗಲೇ ಪೂರ್ಣಗೊಳಿಸಿದೆ. ಮತದಾರರ ಪಟ್ಟಿ, ಮತಗಟ್ಟೆಗಳ ವ್ಯವಸ್ಥೆ ಹಾಗೂ ಚುನಾವಣಾ ಸಿಬ್ಬಂದಿಗಳ ನಿಯೋಜನೆ ಸೇರಿದಂತೆ ತಾಂತ್ರಿಕ ಪ್ರಕ್ರಿಯೆಗಳು ಮುಕ್ತಾಯಗೊಂಡಿವೆ. ಕೇವಲ ಅಧಿಕೃತ ದಿನಾಂಕದ ಘೋಷಣೆಯಷ್ಟೇ ಬಾಕಿ ಉಳಿದಿದೆ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ದಿನಾಂಕ ನಿಗದಿಗೆ ಮಾನದಂಡ: ಚುನಾವಣಾ ದಿನಾಂಕವನ್ನು ಅಂತಿಮಗೊಳಿಸುವ ಮುನ್ನ ಕೆಲವು ಪ್ರಮುಖ ಅಂಶಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದೆ. ಮುಖ್ಯವಾಗಿ ಜೂನ್ ತಿಂಗಳಿನಲ್ಲಿ ಆರಂಭವಾಗುವ ಮುಂಗಾರು ಮಳೆ ಮತ್ತು ಶಾಲಾ-ಕಾಲೇಜುಗಳ ಪುನರಾರಂಭದ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ದಿನಾಂಕವನ್ನು ನಿಗದಿಪಡಿಸಲಾಗುವುದು. ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ.
ಅಂತಿಮ ಹಂತದ ಚರ್ಚೆ: ಜಿಬಿಎ ಸೂಚನೆಯಂತೆ ಜೂನ್ 14ರಿಂದ 24ರ ಅವಧಿಯಲ್ಲಿ ಮತದಾನ ಪ್ರಕ್ರಿಯೆ ಮುಗಿಸಲು ಆಯೋಗ ಚಿಂತನೆ ನಡೆಸಿದೆ. ಮಳೆ ಮತ್ತು ಶಾಲಾ ಸೌಲಭ್ಯಗಳ ಲಭ್ಯತೆಯನ್ನು ಪರಿಶೀಲಿಸಿದ ನಂತರ, ಮುಂದಿನ ಕೆಲವೇ ದಿನಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.








