ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮನೆ ಮಾಲೀಕನೇ ಬಾಡಿಗೆ ಮನೆಯಲ್ಲಿದ್ದ ೮ ವರ್ಷದ ಬಾಲಕಿ ಮೇಲೆ ಅತ್ಯಾಚ್ಯಾರ ನಡೆಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮನೆ ಮಾಲೀಕ ಹರೀಶ್ ಎಂಬಾತ ಬಾಡಿಗೆಗೆ ಬಂದಿದ್ದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.
ಬಾಡಿಗೆ ಮನೆಯವರು ಕೆಲಸಕ್ಕೆ ತೆರಳಿದ್ದ ವೇಳೆ ಮನೆ ಮಾಲೀಕ ಹರೀಶ್ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸದ್ಯ ಹರೀಶ್ ನ್ನು ಪೊಲೀಸರು ಬಂಧಿಸಿದ್ದಾರೆ. ಒಂದು ತಿಂಗಳ ಹಿಂದೆ ಹರೀಶ್ ಮನೆಗೆ ಬಾಡಿಗೆ ಬಂದಿದ್ದರು. ಬಾಲಕಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.