ಬೆಂಗಳೂರು: ತಾವರೆಕರೆ ಗ್ರಾಮದಲ್ಲಿ 14 ವರ್ಷದ ಬಾಲಕಿಯ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರು ಹೊರವಲಯದ ತಾವರೆಕೆರೆಯಲ್ಲಿ ಈ ಒಂದು ಕೃತ್ಯ ನಡೆದಿದೆ. ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ತಂದೆ ತಾಯಿ ಕೆಲಸಕ್ಕೆ ಹೋಗಿದ್ದಾಗ ಬಾಲಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಯಚೂರು ಮೂಲದವನು ಎಂದು ತಿಳಿದುಬಂದಿದೆ.