ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ‘ಹಸಿರಾಯಿತು ಕನ್ನಡ ಉಸಿರಾಯಿತು ಕನ್ನಡ’ ಎಂದು ವರ್ಷಪೂರ್ತಿ ಆಚರಿಸುತ್ತ ಬಂದಿದ್ದೇವೆ.ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸಂದೇಶ ನೀಡುವ ಕೆಲಸ ಮಾಡಿದ್ದೇವೆ ಎಂದು ವಿಧಾನಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ನೀಡಿದರು.
ಬೆಂಗಳೂರಿನ ವಿಧಾನಸೌಧದ ಬಳಿ ಭುವನೇಶ್ವರಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸಂದೇಶ ನೀಡುವ ಕೆಲಸ ಮಾಡಿದ್ದೇವೆ. ರಾಜ್ಯಾದ್ಯಂತ ರಥಯಾತ್ರೆ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಎಲ್ಲಾ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಹಾಕಿಸುವ ಕೆಲಸವಾಗಿದೆ. ಅಲ್ಲದೆ ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ ಮಾಡಲಾಗಿದೆ.
ನವೆಂಬರ್ 1ರಂದು ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡುತ್ತಿದ್ದರು. ನಮ್ಮ ಸರ್ಕಾರ ಅದಕ್ಕೆ ಬ್ರೇಕ್ ಹಾಕಿದೆ. ನಮ್ಮದು ಕನ್ನಡಿಗರ ಸರ್ಕಾರ. ನೆಲ, ಜಲ ಭಾಷೆ ವಿಚಾರದಲ್ಲಿ ಸರ್ಕಾರ ಕನ್ನಡಿಗರ ಪರ ನಿಲ್ಲುತ್ತದೆ. ನಾಮಫಲಕ ಅಳವಡಿಕೆಯಲ್ಲೂ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದೇವೆ. ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಜಾಗ ನೋಡಿ ಬಂದಿದ್ದೇವೆ. ಹಾಗಾಗಿ ಗೋವಾದಲ್ಲಿರುವಂತಹ ಕನ್ನಡಿಗರಿಗೆ ಇದು ಉಪಯೋಗವಾಗಲಿದೆ.
ನಮ್ಮ ಸರ್ಕಾರ ವಿಮಾನ ನಿಲ್ದಾನಗಳಲ್ಲೂ ಕೂಡ ಕನ್ನಡ ನಾಮಫಲಕ ಹಾಕಿಸಿದೆ. 50 ಮಹಿಳೆಯರು 50 ಪುರುಷರಿಗೆ ಪ್ರಶಸ್ತಿ ನೀಡುವ ಕೆಲಸ ಮಾಡಿದ್ದೇವೆ. ರಾಜ್ಯದ ಜನರ ಅನುಕೂಲಕ್ಕಾಗಿ 5 ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ ಎಂದು ವಿಧಾನಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ನೀಡಿದರು.