ನವದೆಹಲಿ : ಮೇಕೆದಾಟು ಯೋಜನೇ ಸಂಬಂಧ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಗೆಲುವು ಸಿಕ್ಕಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೀಗ ವಜಾಗೊಳಿಸಿದೆ.
ಹೌದು ಕಳೆದ 7 ವರ್ಷಗಳಿಂದ ತಮಿಳುನಾಡು ಮೆಕೇದಾಟು ಯೋಜನೆಗೆ ಅಡ್ಡಗಾಲು ಹಾಕಿತ್ತು. ಸುಪ್ರೀಂಕೋರ್ಟ್ ನಲ್ಲಿ ತಮಿಳುನಾಡು ಅರ್ಜಿ ಸಲ್ಲಿಸಿ ಅಡ್ಡಗಾಲು ಹಾಕಿತ್ತು. ಇದೀಗ ತಮಿಳುನಾಡು ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಜಯ ದೊರೆತಿದೆ. ಇದರಲ್ಲಿ ಮಧ್ಯ ಪ್ರವೇಶ ಮಾಡಲ್ಲ ಅಂತ ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ತಿಳಿಸಿದೆ.
ಮೇಕೆದಾಟು ಯೋಜನೆ ಇನ್ನು ಆರಂಭಿಕ ಹಂತದಲ್ಲಿ ಇದೆ. ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ಸುಪ್ರೀಂಕೋರ್ಟ್ ತಮಿಳುನಾಡು ಸಲ್ಲಿಸಿದ್ದ ಪರಿಟ್ ಅರ್ಜಿ ವಜಾ ಗೊಳಿಸಿ ಆದೇಶ ಹೊರಡಿಸಿದೆ.








