ಬೆಂಗಳೂರು : ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲಿಯೇ ಚಿನ್ನಾಭರಣ ಮತ್ತು ನಗದು ಕಳ್ಳತನ ಆಗಿದೆ. 300 ಗ್ರಾಮ ಚಿನ್ನಾಭರಣ ಮತ್ತು 1.50 ಲಕ್ಷ ರೂಪಾಯಿ ನಗದು ಹಣ ಇದ್ದಂತಹ ಕೈ ಚೀಲ ಕಳ್ಳತನವಾಗಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ ಈ ಒಂದು ಕಳ್ಳತನ ನಡೆದಿದೆ.
ನವೀನ್ ಎಂಬಾತನಿಗೆ ಸೇರಿದ 300 ಗ್ರಾಂ ಚಿನ್ನಾಭರಣ ಮತ್ತು 1.50 ಲಕ್ಷ ರೂಪಾಯಿ ಕಳ್ಳತನವಾಗಿದೆ. ಕೆಲಸದ ನಿಮಿತ್ಯ ನವೀನ್ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ. ಚಿನ್ನಾಭರಣ ಹಾಗೂ ನಗದು ಇದ್ದ ಕೈಚೀಲದೊಂದಿಗೆ ಬಂದಿದ್ದ. ಸಚಿವರ ಕಚೇರಿಯಲ್ಲಿ ಮಾರನೇ ದಿನ ಸಚಿವರ ಕಚೇರಿಗೆ ಬಂದು ನೋಡಿದಾಗ ಕೈಚೀಲ ನಾಪತ್ತೆಯಾಗಿತ್ತು.
ಗಾಬರಿಗೊಂಡ ನವೀನ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಸಿಸಿಟಿವಿ ಪರಿಶೀಲನೆ ವೇಳೆ ಡಿ ಗ್ರೂಪ್ ನೌಕರಣ ಪಾತ್ರ ಇರುವುದು ಪತ್ತೆಯಾಗಿದೆ. ಆರೋಪಿ ಡಿ ಗ್ರೂಪ್ ನೌಕರರನ್ನು ವಿಧಾನಸೌಧ ಠಾಣೆಪಡಿಸಲು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಮಾಡಿ ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು ತನಿಖೆ ಕೈಗೊಂಡಿದ್ದಾರೆ.








