ಬೆಂಗಳೂರು : ದುಬೈದಿಂದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಚಿನ್ನವನ್ನು ಅಕ್ರಮವಾಗಿ ಕಳ್ಳ ಸಾಗಣೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ವಜಾಗೊಳಿಸಿ ನಿನ್ನೆ ಅದೇಶಿಸಿತ್ತು. ಇದೀಗ ನಟಿ ರನ್ಯಾರಾವ್ ಜಾಮೀನು ಕೋರಿ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಹೌದು ಜಾಮೀನು ಕೋರಿ ಸೇಷನ್ಸ್ ಕೋರ್ಟ್ ಗೆ ನಟಿ ರನ್ಯಾ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ರನ್ಯಾ ರಾವ್ ಪರ ವಕೀಲರು ಸೇಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರನ್ಯಾ ಅವರ ಜಾಮೀನು ಅರ್ಜಿ ವಜಾ ಗೊಳಿಸಿತ್ತು. ಇದೀಗ ಜಾಮೀನು ಕೋರಿ ಸೆಷನ್ಸ್ ಕೋರ್ಟಿಗೆ ಮೇಲ್ಮನವಿ ಸಲ್ಲಿಕೆ ಮಾಡಿದ್ದು, ಸೋಮವಾರ ರನ್ಯಾ ಜಾಮೀನು ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಪ್ರಕರಣದ ಹಿನ್ನೆಲೆ ?
ಕಳೆದ ಮಾ.3ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾರನ್ನು ಗೋಲ್ಡ್ ಸ್ಮಗ್ಲಿಂಗ್ ಆರೋಪದಡಿ ಬಂಧಿಸಿದ್ದ ಡಿಆರ್‌ಐ ಅಧಿಕಾರಿಗಳು, ಅವರಿಂದ ರೂ.12.86 ಕೋಟಿ ಮೌಲ್ಯದ 14.2 Kg ಚಿನ್ನವನ್ನು ಸೀಜ್ ಮಾಡಿದ್ದರು. ಕಸ್ಟಮ್ ಅಧಿಕಾರಿಗಳ ತಪಾಸಣೆ ತಪ್ಪಿಸಿಕೊಳ್ಳಲು ರನ್ಯಾ ಚಿನ್ನವನ್ನು ಬೆಲ್ಟ್ & ಜಾಕೆಟ್‌ಗಳಲ್ಲಿ ಇಟ್ಟುಕೊಂಡು ಬರುತ್ತಿದ್ದರು ಎಂಬ ಆರೋಪವಿದೆ.
ಇದರೊಂದಿಗೆ ಡಿಜಿಪಿ ಶ್ರೇಣಿ ಅಧಿಕಾರಿಯ ಸಾಕು ಮಗಳೂ ಆಗಿರುವ ರನ್ಯಾ, VIP ವ್ಯಕ್ತಿಗಳಿಗೆ ಇರುವ ಮಾರ್ಗದ ಮೂಲಕ ಏರ್ಪೋರ್ಟ್ದಿಂದ ಸುಲಭವಾಗಿ ಹೊರೆಗೆ ಬರುತ್ತಿದ್ದರು ಎಂಬ ಆಪಾದನೆಯೂ ಇದೆ. ಇನ್ನು ಡಿಆರ್‌ಐ ಅಧಿಕಾರಿಗಳು ರೂ.2.06 ಕೋಟಿ ಮೌಲ್ಯದ ಆಭರಣ ಮತ್ತು ರೂ.2.67 ಕೋಟಿ ಹಣವನ್ನು ನಗದು ಜಪ್ತಿಯೂ ಮಾಡಿಕೊಂಡಿದ್ದರು. ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಕೆಲ ರಾಜಕಾರಣಿಗಳ ಬೆಂಬಲವಿದ ಎಂದೂ ವಿಪಕ್ಷ ನಾಯಕರು ಆರೋಪ ಮಾಡುತ್ತಿದ್ದಾರೆ.