ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ರಾಜ್ಯ ಸರ್ಕಾರವು ಒಂದು ತಿಂಗಳ ಗೌರವಧನವನ್ನು ಬಿಡುಗಡೆ ಮಾಡಿದೆ. ಈ ಮೂಲಕ ಕಳೆದ ಎರಡು ತಿಂಗಳಿನಿಂದ ಸಂಬಳ ಇಲ್ಲದೇ ಪರದಾಟ ನಡೆಸಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಕಳೆದ 3-4 ತಿಂಗಳಿನಿಂದ ಸಂಬಳ ಬಾರದೇ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪರದಾಟ ನಡೆಸಿದ್ದರು. ಕಳೆದ ಮೂರು ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರಿಗೆ ಗೌರವಧನ ನೀಡುತ್ತಿಲ್ಲ ಎಂದು ಅಂಗನವಾಡಿ ಸಿಬ್ಬಂದಿ ತಮ್ಮ ಅಳಲು ತೋಡಿಕೊಂಡಿದ್ದರು. ಇದೀಗ ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಒಂದು ತಿಂಗಳ ಗೌರವಧನ ಬಿಡುಗಡೆ ಮಾಡಿದ್ದು, ಉಳಿದ 2 ತಿಂಗಳ ಗೌರವಧನವನ್ನು ಶೀಘ್ರವೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದೆ.