ಚಾಮರಾಜನಗರ : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್. ಶೀಘ್ರವೇ ಹಾಲಿನ ದರವನ್ನು 5 ರೂ. ಏರಿಕೆ ಮಾಡಲಾಗುವುದು ಎಂದು ಪಶುಸಂಗೋಪನಾ ಸಚಿವ ವೆಂಕಟೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಲೀಟರ್ ಹಾಲಿಗೆ 5 ರೂ. ಏರಿಕೆ ಮಾಡುವಂತೆ ರೈತರು ಒತ್ತಾಯಿಸಿದ್ದಾರೆ. ಹೀಗಾಗಿ ಶೀಘ್ರವೇ ಹಾಲಿನ ದರನವನ್ನು 5 ರೂ. ಏರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಹಾಲು ಒಕ್ಕೂಟಗಳು ರೈತರಿಂದ ಖರೀದಿಸುವ ಹಾಲಿನ ದರವನ್ನು ಲೀಟರ್ ಗೆ 5 ರೂ. ಹೆಚ್ಚಳ ಮಾಡಲಾಗುವುದು. ಜನವರಿಯಿಂದ ಇದನ್ನು ಜಾರಿಗೊಳಿಸಲಾಗುವುದು, ಲೀಟರ್ ಹಾಲಿಗೆ ಪ್ರಸ್ತುತ 33 ರೂಪಾಯಿ ಕೊಡಲಾಗುತ್ತಿದೆ. ಈ ಹಿಂದೆ 35 ರೂಪಾಯಿ ಇತ್ತು. ಖರೀದಿ ದರ 5 ರೂಪಾಯಿ ಹೆಚ್ಚಳ ಮಾಡಲು ಸಿಎಂ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಅವರ ಸೂಚನೆಯಂತೆ ಹೊಸ ವರ್ಷದ ಕೊಡುಗೆಯಾಗಿ ಪ್ರತಿ ಲೀಟರ್ ಹಾಲಿಗೆ ಐದು ರೂಪಾಯಿ ಹೆಚ್ಚುವರಿ ಆಗಿ ನೀಡಲಾಗುವುದು. 5 ರೂಪಾಯಿ ಪೂರ್ಣವಾಗಿ ರೈತರಿಗೆ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.