ಬೆಂಗಳೂರು : ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಇಷ್ಟು ದಿನ ಮಹಿಳೆಯರಿಗೆ 2000 ನೀಡುತ್ತಾ ಬಂದಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಲಿಂಗತ್ವ ಅಲ್ಪಸಂಖ್ಯಾತರಿಗೂ ಕೂಡ ಇನ್ನು ಮುಂದೆ ಅವರ ಖಾತೆಗೆ 2,000 ಹಣ ಬರಲಿದೆ.
ಹೌದು ಈ ಕುರಿತು ರಾಜ್ಯ ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದೆ. ಅದರಂತೆ ಇನ್ನು ಮುಂದೆ ಮಹಿಳೆಯರ ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೂ ಕೂಡ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಅಡಿ ಅವರ ಖಾತೆಗೆ 2000 ಹಣ ಬಂದು ಬೀಳಲಿದೆ. ಅದರಿಂದ ಸಹಜವಾಗಿ ಲಿಂಗತ ಅಲ್ಪಸಂಖ್ಯಾತರ ಆರ್ಥಿಕ ಮಟ್ಟ ಸುಧಾರಿಸುತ್ತದೆ ಎಂದು ಹೇಳಲಾಗುತ್ತಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಲಿಂಗತ್ವ ಅಲ್ಪಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಗೆ ಜು.8ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್-ಜೆಂಡರ್ ಗುರುತಿನ ಚೀಟಿ, ಪಾಸ್‍ಪೋರ್ಟ್ ಅಳತೆಯ ಫೋಟೋ ಮತ್ತು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ನೀಡಬೇಕಾದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ತಿಳಿಸಿದೆ.