ಬೆಂಗಳೂರು : 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೇಮಕವಾದ ಪದವೀಧರ ಪ್ರಾಥಮಿಕ ಶಿಕ್ಷಕರ ಹಿಂದಿನ ಸೇವೆಯನ್ನು ವೇತನ ಸಂರಕ್ಷಣೆ ಉದ್ದೇಶಕ್ಕಾಗಿ ಪರಿಗಣಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
2022-23ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಎಸ್. ಎಲ್.ಪಿ. ದಾಖಲಾಗಿದ್ದು, ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆ ನೀಡಿರುವುದರಿಂದ ಅಂತಿಮ ಆದೇಶ ಬಂದ ನಂತರ ಕ್ರಮವಹಿಸುವಂತೆ ಸೂಚಿಸಿರುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ವೇತನ ಸಂರಕ್ಷಣೆ ಸಂಬಂಧಿತ ಕಡತಗಳು ವಿಲೇವಾರಿಯಾಗದೆ ಬಾಕಿ ಉಳಿದಿರುತ್ತವೆ. ಈ ಕುರಿತು ಅಗತ್ಯ ಕ್ರಮವಹಿಸಲು ಸರ್ಕಾರದ ಮಾರ್ಗದರ್ಶನ ಕೋರಿ ದಿನಾಂಕ: 22/1/2025 ರಂದು ಪತ್ರ ಬರೆಯಲಾಗಿತ್ತು.
2022ರ GPT ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರಸ್ತುತ ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿಯಿರುವ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು ಈಗಾಗಲೇ ನೇಮಕಾತಿ ಆದೇಶ ನೀಡಿರುವ ನೇಮಕಾತಿಗಳು ಈ ಪ್ರಕರಣದಲ್ಲಿನ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತವೆ ಎಂದು 8 (It is clarified that the joining of the aforesaid 11494 candidates working on subject posts is subject to the outcome of the present petitions) 있고, ನ್ಯಾಯಾಲಯದಲ್ಲಿ ಪ್ರಕರಣವು ಅಂತಿಮವಾಗಿ ಇತ್ಯರ್ಥವಾದ ನಂತರ 2022 ರ GPT ಶಿಕ್ಷಕರ ನೇಮಕಾತಿಯಲ್ಲಿ ಮರುನೇಮಕಗೊಂಡ ಶಿಕ್ಷಕರ ಹಿಂದಿನ ಸೇವೆ ಪರಿಗಣಿಸುವ ಕುರಿತಾದ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಉಲ್ಲೇಖ 2 ರ ಪತ್ರದಲ್ಲಿ ಸೂಚಿಸಲಾಗಿದೆ. ಅದರಂತೆ ಕ್ರಮವಹಿಸಲು ಸಂಬಂಧಪಟ್ಟ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರುಗಳಿಗೆ ಈ ಮೂಲಕ ತಿಳಿಸಲಾಗಿದೆ.