ಬೆಂಗಳೂರು : ರಾಜ್ಯದ ಯಜಮಾನರಿಗೆ ಇದೀಗ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಿದ್ದು, ಐದು ಗ್ಯಾರಂಟಿ ಯೋಜನೆಗಲ್ಲಿ ಪ್ರಮುಖ ಗ್ಯಾರಂಟಿ ಯೋಜನೆಯದ ಗ್ರಹಲಕ್ಷ್ಮಿ ಯೋಜನೆ ಅಡಿಯಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಹೌದು ಷೇರು ಸಂಗ್ರಹಣೆಗೆ ಮಹಾಲಕ್ಷ್ಮಿ ಯೋಜನೆ ಅಡಿಯಲ್ಲಿ ಸಹಕಾರ ಸಂಘ ಸ್ಥಾಪನೆಗೆ ಸಹಕಾರ ಇಲಾಖೆ ಇದೀಗ ಅನುಮತಿ ನೀಡಿದೆ. ಸಹಕಾರ ಸಂಘ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಈ ಒಂದು ಸಹಕಾರ ಸಂಘ ಸ್ಥಾಪನೆ ಮಾಡುವುದರಿಂದ ಮತ್ತಷ್ಟು ಹೆಚ್ಚಿನ ಅನುಕೂಲತೆಗಳು ಆಗಲಿವೆ ಎಂದು ಹೇಳಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಸಹಕಾರ ಸಂಘ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ