ಬೆಂಗಳೂರು : ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ತನಿಖೆಯಲ್ಲಿ ಕೃಪಾ ನಿಧಿ ಕಾಲೇಜಿನ ಕಳ್ಳಾಟ ಬಯಲಾಗಿದೆ. ಉದ್ದೇಶಪೂರ್ವಕವಾಗಿ ಜನಿವಾರ ತೆಗೆದಿರುವುದು ಬಯಲಾಗಿದೆ. ಹೌದು ಕೃಪಾ ನಿಧಿ ಕಾಲೇಜಿನಲ್ಲಿ ಮುಂದಿನ ವರ್ಷಗಳಲ್ಲಿ CET ಪರೀಕ್ಷೆಗಳು ಸೇರಿದಂತೆ ಯಾವುದೇ ಸರ್ಕಾರಿ ಪರೀಕ್ಷೆಗಳು ನಡೆಸಿದಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.
ಸರ್ಕಾರಕ್ಕೆ ಬೆಂಗಳೂರು ನಗರ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದು, ಉದ್ದೇಶಪೂರ್ವಕವಾಗಿ ಜನಿವಾರ ತೆಗಿಸಲಾಗಿದೆ ಎನ್ನುವ ಮಾಹಿತಿ ಸಿಗುತ್ತಿದೆ. CET ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಿದ್ದಾರೆ. ನಮ್ಮ ಅಧಿಕಾರಿಗಳನ್ನ ಸಿಇಟಿ ಕೇಂದ್ರಕ್ಕೆ ಕಳುಹಿಸಿ ತನಿಖೆ ಮಾಡಿಸಿದ್ದೇವೆ. ಸರ್ಕಾರ ಈ ವಿಷಯದಲ್ಲಿ ಬಹಳ ಗಂಭೀರವಾಗಿದ್ದು ಮೂರು ಜನರ ಮೇಲೆ ಕಳಿಸಿದ್ದು ಅಲ್ಲದೆ ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಅಂತಹ ಘಟನೆಗಳು ಮತ್ತು ಮರು ಕಳಿಸಬಾರದು ಎನ್ನುವ ಕಾರಣಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ. ಕಳೆದ ವರ್ಷ ಕೂಡ ಇದೇ ತರಹ ಘಟನೆ ನಡೆದಿತ್ತು. ತನಿಖೆಯ ವರದಿ ಬಂದಿದ್ದು ಅಂತಹ ಕೇಂದ್ರದಲ್ಲಿ ಮುಂದಿನ ವರ್ಷಗಳಲ್ಲಿ ಕೆಇಎ ವತಿಯಿಂದ ಸಿಇಟಿ ಪರೀಕ್ಷೆಗಳನ್ನು ನಡೆಸಬಾರದು ಅಂತ ಸರ್ಕಾರಕ್ಕೆ ವರದಿ ಸಲ್ಲಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದರು.








