ಬೆಂಗಳೂರು : ರಾಜ್ಯದಲ್ಲಿ 26 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಶಿಕ್ಷಕರ ಹುದ್ದೆ ಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್ 9 ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಆದೇಶ ಹೊರಡಿಸಲಾಗುತ್ತದೆ ಎಂದು ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಅದೇ ರೀತಿ ಕಲ್ಯಾಣ ಕರ್ನಾಟಕದಲ್ಲೂ ನೇಮಕಾತಿ ಆದೇಶ ಹೊರಡಿಸುತ್ತೇವೆ. ರಾಜ್ಯದಲ್ಲಿ 800 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲಾಗುತ್ತದೆ ಆರನೇ ತರಗತಿಯಿಂದ ಕನ್ನಡದ ಜೊತೆಗೆ ಇಂಗ್ಲಿಷ್ ಕಲಿಕೆಗೂ ಅವಕಾಶ ಕಲ್ಪಿಸಲಾಗಿದ್ದು ಕರ್ನಾಟಕ ಪಬ್ಲಿಕ್ ಶಾಲೆಗೆ 3000 ಕೋಟಿ ರೂಪಾಯಿ ಮೀಸಲು ಇಡಲಾಗಿದೆ. ನವೆಂಬರ್ ಎರಡನೇ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಗುದ್ದಲಿ ಪೂಜೆ ಮಾಡಲಿದ್ದಾರೆ. ಆಧಾರಿತ ಶಿಕ್ಷಣ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈಗ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಕಲಿಸಲಾಗುತ್ತದೆ ಎಂದು ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.