ಬೆಂಗಳೂರು: ರಾಜ್ಯದ ಪತ್ರಕರ್ತರಿಗೂ 5 ಲಕ್ಷದವರೆಗೆ ಉಚಿತ ಆರೋಗ್ಯ ಸೇವೆಯನ್ನು ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದರು. ಇಂತಹ ಮಾಧ್ಯಮ ಸಂಜೀವಿನಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಚಾಲನೆ ನೀಡಿದ್ದಾರೆ.
ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಉಚಿತ ಆರೋಗ್ಯ ಸೇವೆಯ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿತ್ತಿರುವಂತ ಮಾಧ್ಯಮ ಸಂಜೀವಿನಿ ಯೋಜನೆಯಿಂದಾಗಿ ಪತ್ರಕರ್ತರಿಗೆ 5 ಲಕ್ಷದವರೆಗೆ ಉಚಿತವಾಗಿ ಆರೋಗ್ಯ ಸೇವೆಯು ದೊರೆಯುವಂತೆ ಆಗಲಿದೆ. ಇದಲ್ಲದೇ ಗ್ರಾಮೀಣ ಪತ್ರಕರ್ತರಿಗೂ ಜಿಲ್ಲೆಯಾಧ್ಯಂತ ಸಂಚರಿಸೋದಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಪಾಸ್ ವಿತರಣೆಗೂ ಚಾಲನೆ ನೀಡಲಿದ್ದಾರೆ.
ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಉಚಿತ ಆರೋಗ್ಯ ಸೇವೆಯ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 1 ರಂದು ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ. pic.twitter.com/nVf6rVuG1T
— DIPR Karnataka (@KarnatakaVarthe) June 30, 2025