ಬೆಂಗಳೂರು : ಬೆಂಗಳೂರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ‘ನಮ್ಮ ಮೆಟ್ರೋ’ ಟಿಕೆಟ್ ದರ ಸದ್ಯಕ್ಕೆ ಏರಿಕೆ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಹೌದು, ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡದ ಹಿನ್ನೆಲೆ ಸದ್ಯಕ್ಕೆ ಟಿಕೆಟ್ ದರ ಏರಿಸದೇ ಇರಲು ಬಿಎಂಆರ್ ಸಿಎಲ್ ನಿರ್ಧರಿಸಿದೆ ಎನ್ನಲಾಗಿದೆ. ಈ ವರ್ಷ ಮೆಟ್ರೋ ಟಿಕೆಟ್ ದರ ಏರಿಕೆ ಆಗುವುದು ಅನುಮಾನವಾಗಿದೆ. ಮೆಟ್ರೋ ದರ ಪರಿಷ್ಕರಣೆ ಸಂಬಂಧ ಬಿಎಂಆರ್ ಸಿಎಲ್ ಅಧಿಕಾರಿಗಳು ಮತ್ತು ದರ ಏರಿಕೆ ಸಮಿತಿಯ ಸದಸ್ಯರ ಜೊತೆ ಸಭೆ ನಡೆದಿತ್ತು. ಮೂಲಗಳ ಪ್ರಕಾರ ಶೇ.15 ರಿಂದ 20 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ದರ ಏರಿಕೆಗೆ ಬ್ರೇಕ್ ಬಿದ್ದಿದೆ.
ಕಾರ್ಯಾಚರಣೆ ವೆಚ್ಚ ಅಧಿಕವಾದ ಹಿನ್ನೆಲೆ ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾಪ ಮಾಡಲಾಗಿತ್ತು. ಆದರೆ ನಮ್ಮ ಮೆಟ್ರೋ ಟಿಕೆಟ್ ದರಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ. ಹೀಗಾಗಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.