ಬೆಂಗಳೂರು : ಸಾಮಾನ್ಯವಾಗಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟ ನೀಡಲಾಗುತ್ತಿತ್ತು ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಊಟ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಸರ್ಕಾರ ಈ ಒಂದು ಯೋಜನೆ ರೂಪಿಸಿತ್ತು. ಇದೀಗ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡಲು ಶಿಕ್ಷಣ ಇಲಾಖೆ, ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಹೌದು ಪಿಯುಸಿ ವಿದ್ಯಾರ್ಥಿಗಳಿಗೂ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್, ಸಿಕ್ಕಿದ್ದು ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಸರಕಾರಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಚಿಂತನೆ ನಡೆದಿದೆ ಸರ್ಕಾರಿ ಕಾಲೇಜುಗಳ ಪ್ರವೇಶ ಅತಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ. ಈ ಮೂಲಕ ಇನ್ನು ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಇನ್ಮುಂದೆ ಮಧ್ಯಾಹ್ನದ ಬಿಸಿ ಊಟ ನೀಡಲಾಗುತ್ತದೆ.








