ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಆನ್‌ಲೈನ್‌ನಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ದಿನಾಂಕವನ್ನು ಮೇ.25 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ವರ್ಗಾವಣೆ ಬಯಸಿದ ಪೊಲೀಸ್ ಸಿಬ್ಬಂದಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವೆಂದು ನಿಗದಿಮಾಡಲಾಗಿತ್ತು. ಆಡಳಿತಾತ್ಮಕ ಕಾರಣಗಳಿಂದ ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಲು ಕಾಲಮಿತಿಯನ್ನು ಮೇ 25ರ ವರೆಗೆ ವಿಸ್ತರಿಸಲಾಗಿದೆ.
ವರ್ಗಾವಣೆ ಬಯಸುವ ಪೊಲೀಸ್ ಸಿಬ್ಬಂದಿಗಳು ಪರಿಷ್ಕೃತವಾಗಿ ಅರ್ಜಿ ಸಲ್ಲಿಸಬಹುದು ಎಂದು ಪೊಲೀಸ್ ಮಹಾನಿರ್ದೇಶಕರು ಸೂಚನೆ ನೀಡಿದ್ದಾರೆ.