ಬೆಂಗಳೂರು : 2024-25 ನೇ ಸಾಲಿನ ಮೆಟ್ರಿಕ್ ನಂತರದ ಶೈಕ್ಷಣಿಕ ಸಹಾಯಧನಕ್ಕೆ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 15.01.2025 ರವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯವನ್ನು ನೀಡಲಾಗುತ್ತಿದೆ.
2023-24ನೇ ಸಾಲಿನ ಶೈಕ್ಷಣಿಕ ಸಹಾಯಧನದ ಅರ್ಜಿಗಳನ್ನು ದಿನಾಂಕ: 15/03/2024 ರಿಂದ ಮತ್ತು 2024-25ನೇ ಸಾಲಿನ ಶೈಕ್ಷಣಿಕ ಸಹಾಯಧನದ ಅರ್ಜಿಗಳನ್ನು ದಿನಾಂಕ: 25/09/2024 ರಿಂದ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಸ್ವೀಕರಿಸಲಾಗಿದೆ. ಈ ಅರ್ಜಿ ಸಲ್ಲಿಸಲು ದಿನಾಂಕ: 31/12/2024 ರಂದು ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿತ್ತು. ಅದರನ್ವಯ ಮಂಡಳಿಯು 2023-24ನೇ ಸಾಲಿನ ಶೈಕ್ಷಣಿಕ ಸಹಾಯಧನದ ಅರ್ಜಿಗಳ ಸ್ವೀಕೃತಿಯನ್ನು ಮುಕ್ತಾಯಗೊಳಿಸಿತ್ತು. ಇದೀಗ ಮೆಟ್ರಿಕ್ ನಂತರದ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.