ಬೆಂಗಳೂರು : ನ್ಯಾಯಬೆಲೆ ಅಂಗಡಿಯಲ್ಲಿ ಇಂದಿರಾ ಆಹಾರ ಕಿಟ್ ನೀಡಲು QR ಸ್ಕ್ಯಾನ್ ಕಡ್ಡಾಯ ಮಾಡುವಂತೆ ಸಿಎಂ ಸಿದ್ದರಾಮಯ್ಯ ಆಹಾರ ಇಲಾಖೆಗೆ ಸೂಚನೆ ನೀಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5ಕೆ.ಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವ ಕುರಿತು ಈಗಾಗಲೇ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಇಂದಿರಾ ಕಿಟ್‌ನಲ್ಲಿ ಏನೆಲ್ಲಾ ಸಾಮಗ್ರಿ ಸಿಗಲಿವೆ?
ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆಜಿ ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು. ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್ ಅಗತ್ಯವಿದ್ದು, ಇದಕ್ಕಾಗಿ ಪ್ರತಿ ತಿಂಗಳು ರೂ.466 ಕೋಟಿ ವೆಚ್ಚ ಅಂದಾಜಿಸಲಾಗಿದೆ. ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18628 ಮೆ.ಟನ್ ತೊಗರಿ ಬೇಳೆ ಮತ್ತು ತಲಾ 12419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯ ಅಂದಾಜಿಸಲಾಗಿದೆ. ಆಹಾರ ಕಿಟ್‌ನಲ್ಲಿ ಪೌಷ್ಟಿಕಾಂಶಗಳಿಂದ ಕೂಡಿರುವ ತೊಗರಿ ಬೇಳೆ ಗರಿಷ್ಟ ಪ್ರಮಾಣದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
ಪ್ರತಿ ತಿಂಗಳು 18,628 ಮೆಟ್ರಿಕ್ ಟೆನ್ ತೊಗರಿ ಬೆಳೆ,12,419 ಮೆಟ್ರಿಕ್ ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ಅಗತ್ಯವಿದೆ ಪೌಷ್ಟಿಕಾಂಶದಿಂದ ಕೂಡಿರುವ ತೊಗರಿಬೇಳೆ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೇಂದ್ರ ಆಹಾರ ಉತ್ಪನ್ನ ಸರಬರಾಜು ಸಂಸ್ಥೆಯ ಮೂಲಕ ಖರೀದಿ ಪ್ರಕ್ರಿಯೆ ನಡೆಯಲಿದ್ದು ಪಾರದರ್ಶಕವಾಗಿ ಕೆಟಿಪಿಪಿ ಅನ್ವಯ ಪ್ರಕ್ರಿಯೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಉತ್ತಮ ಗುಣಮಟ್ಟ ಆಹಾರ ಸಾಮಗ್ರಿ ಪೂರೈಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ರಾಜಿ ಆಗಬಾರದು ಅಳತೆಯಲ್ಲಿ ಹೆಚ್ಚು ಕಡಿಮೆ ಆಗದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ರೀತಿಯ ದೂರಿಗೆ ಅವಕಾಶವಾಗದಂತೆ ಈ ಒಂದು ಯೋಜನೆ ಅನುಷ್ಠಾನ ಆಗಬೇಕು. ಇಂದಿರಾ ಫುಡ್ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಅಳವಡಿಸಿ.
ಅದರ ಆಧಾರದಲ್ಲಿ ಪಡಿತರ ಚೀಟಿದಾರರಿಗೆ ಫುಡ್ ಕಿಟ್ ವಿತರಿಸಿ. ಸರಬರಾಜದ ಇದರ ಫುಡ್ ಕಿಟ್ಟುಗಳನ್ನು ನಿಗಮದ ಗೋದಾಮು, ಸಗಟು ಮಳಿಗೆಗಳ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಪೂರೈಸಬೇಕು ಪ್ರತಿ ತಿಂಗಳು 10 ನೇ ತಾರೀಕಿನೊಳಗೆ ಇಂದಿರಾ ಫುಡ್ ವಿಧರಿಸಬೇಕು ಆಹಾರ ಮಂತ್ರಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.








