ಬೆಂಗಳೂರು : ಬೆಂಗಳೂರಿನ ಶ್ರೀನಿವಾಸಪುರದ ಬಳಿ ಇರುವ ಕೋಗಿಲು ಲೇಔಟ್ ನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಇದೀಗ ರಾಜ್ಯ ಸರ್ಕಾರ ಬೇರೆ ಕಡೆ ವಸತಿ ಕಲ್ಪಿಸಲು ಮುಂದಾಗಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ಮನೆ ನಿರ್ಮಿಸಲು ಸರ್ಕಾರ ಮುಂದಾಗಿದೆ.
ಹೌದು, ಕೋಗಿಲು ಲೇಔಟ್ ನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿ ಮನೆ ಸಿಗಲಿದ್ದು, ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಸಂತ್ರಸ್ತರಿಗೆ ವಸತಿ ಕಲ್ಪಿಸಲಾಗಿದೆ. 180 ಮನೆಗಳನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು ಆದರೆ ಹೋರಾಟಗಾರರು 250 ಮನೆಗಳನ್ನು ಕೇಳಿದ್ದರು.
ಇದೀಗ ವಸತಿ ಇಲಾಖೆಯಿಂದ 180 ಮನೆ ನೀಡಲು ಒಪ್ಪಿಗೆ ನೀಡಲಾಗಿದೆ. ಅಷ್ಟೆ ಅಲ್ಲದೇ ರಿಜಿಸ್ಟರ್ ಮಾಡಿಕೊಡುವುದಾಗಿಯೂ ಕೂಡ ರಾಜ್ಯ ಸರ್ಕಾರ ಭರವಸೆ ನೀಡಿದೆ. ಶೀಘ್ರದಲ್ಲಿಯೇ ನಿವಾಸಿಗಳನ್ನು ಅಲ್ಲಿಗೆ ಶಿಫ್ಟ್ ಮಾಡಲಿದೆ. ಈ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಅಧಿಕೃತ ಘೋಷಣೆ ಮಾಡಲಿದ್ದಾರೆ.








