ಕೋಲಾರ : ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿ ರಾಜ್ಯದ ಜನತೆಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಶೀಘ್ರವೇ ಹೊಸ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, . ಕಳೆದ ಎರಡು ವರ್ಷಗಳಿಂದ ಬಿಪಿಎಲ್ ಕಾರ್ಡ್ಗಾಗಿ ಕಾಯುತ್ತಿರುವವರಿಗೆ ಶೀಘ್ರದಲ್ಲೇ ವಿತರಿಸಲಾಗುವುದು, ಅರ್ಹತೆ ಇಲ್ಲದವರನ್ನು ಎಪಿಎಲ್ ಪಟ್ಟಿಗೆ ಸೇರಿಸುವ ಕೆಲಸ ನಡೆಯುತ್ತಿದೆ. ಅರ್ಹತೆ ಇರುವ ಎಲ್ಲರಿಗೂ ಬಿಪಿಎಲ್ ಕಾರ್ಡ್ಗಳನ್ನು ವಿತರಿಸಲಾಗುವುದು ಎಂದು ಹೇಳಿದರು.
ಸದ್ಯ ಆಹಾರ ಇಲಾಖೆಯಿಂದ ಕರ್ನಾಟಕದೆಲ್ಲೆಡೆ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ ಕಾರ್ಯ ನಡೆಯುತ್ತಿದೆ. ಅರ್ಹರೆ ಇಲ್ಲದೇ ಇದ್ದರೂ ಬಿಪಿಎಲ್ ಕಾರ್ಡ್ ಹೊಂಡಿದ್ದರೆ ಅಂತಹವರನ್ನು ಪತ್ತೆ ಮಾಡಿ ಅವರ ಕಾರ್ಡ್ ಅನ್ನು ಎಪಿಎಲ್ಗೆ ಬದಲಾವಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.