ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಬೆಂಗಳೂರಿನ ನೈಸ್ ರಸ್ತೆಯಲ್ಲಿ ಗೂಡ್ಸ್ ವಾಹನವೊಂದು ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಆಕಸ್ಮಿಕ ಬೆಂಕಿಯಿಂದ ಗೂಡ್ಸ್ ವಾಹನ ಬೆಂಕಿಗೆ ಆಹುತಿಯಾಗಿದೆ. ನೋಡು ನೋಡುತ್ತಲೇ ಗೂಡ್ಸ್ ವಾಹನ ಸಂಪೂರ್ಣವಾಗಿ ಬೆಂಕಿಯಿಂದ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.