ಬೆಂಗಳೂರು : ರಾಜ್ಯದಲ್ಲಿ ಸದ್ಯ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ಇದೀಗ ಮುಸ್ಲಿಂ ಧರ್ಮದ ಜನರು ಹೆಚ್ಚಾಗಿ ವಾಸಿಸುವ ಗೋರಿಪಾಳ್ಯವನ್ನು ಪಾಕಿಸ್ತಾನ ಎಂದು ಕರೆಯುವ ಮೂಲಕ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ವಿವಾದವನ್ನು ಹುಟ್ಟುಹಾಕಿದ್ದಾರೆ.
ಹೌದು ಪ್ರಕರಣ ಒಂದರ ವಿಚಾರಣೆ ವೇಳೆ ಮಾತನಾಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಈ ಹೇಳಿಕೆ ನೀಡಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಇತ್ತ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ, ಮೈಸೂರು ರಸ್ತೆಯ ಮೇಲ್ಸೇತುವೆಗೆ ಹೋಗಿ, ಪ್ರತಿ ಆಟೋ ರಿಕ್ಷಾದಲ್ಲಿ 10 ಜನರು ಇರುತ್ತಾರೆ. ಇದು ಅನ್ವಯಿಸುವುದಿಲ್ಲ ಏಕೆಂದರೆ ಗೋರಿ ಪಾಳ್ಯದಿಂದ ಮಾರುಕಟ್ಟೆಯವರೆಗಿನ ಮೈಸೂರು ರಸ್ತೆಯ ಮೇಲ್ವೇತುವೆ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ ಎಂದು ಹೇಳಿದ್ದಾರೆ.
ಮುಂದುವರೆದು ನೀವು ಆ ಸ್ಥಳಕ್ಕೆ ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ಅಲ್ಲಿ ಇರಿಸಿದರೂ ಅವರನ್ನೇ ಹಿಡಿದು ಥಳಿಸುತ್ತಾರೆ ಎಂದು ನ್ಯಾಯಮೂರ್ತಿಗಳು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತ ನ್ಯಾಯಾಧೀಶರ ಹೇಳಿಕೆ ವೈರಲ್ ಆಗುತ್ತಿದ್ದಂತೆ ಹಲವರು ಕಿಡಿಕಾರಿದ್ದು, ವ್ಯಾಪಾಕ ಆಕ್ರೋಶ ವ್ಯಕ್ತವಾಗುತ್ತಿದೆ.
ಕೆಲವರು ಸಾಂವಿಧಾನಿಕ ಹುದ್ದೆಯಲ್ಲಿರಬೇಕಾದವರೇ ಈ ರೀತಿಯ ಹೇಳಿಕೆ ನೀಡಿರುವುದು ಅನಪೇಕ್ಷಿತವಾಗಿದ್ದು, ಭಾರತದಲ್ಲಿರುವ ಮುಸ್ಲಿಮರನ್ನು ಮತ್ತಷ್ಟು ಅಮಾನುಷವಾಗಿ ನಡೆಸಿಕೊಳ್ಳುತ್ತಾರೆ. ಈ ರೀತಿ ಹೇಳಿಕೆ ನೀಡಿರುವುದು ಹುದ್ದೆ ಮೇಲಿನ ಗೌರವ ಕಡಿಮೆ ಮಾಡುತ್ತದೆ ಎಂದು ಹಲವರು ಕಮೆಂಟ್ ಹಾಕಿ ಕಿಡಿಕಾರಿದ್ದಾರೆ.
Judge points out Gori Palya a scary place because it is muslim dominated area with criminals pic.twitter.com/BFCgGqcmRv
— LawBeat (@LawBeatInd) September 19, 2024