ನವದೆಹಲಿ : ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಶೇಕಡಾ 25 ರಷ್ಟು ಡಿಎ ಅಂದರೆ ತುಟ್ಟಿ ಭತ್ಯೆಯನ್ನು ಪಾವತಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸಂಜಯ್ ಕರೋಲ್ ನೇತೃತ್ವದ ಪೀಠವು ಈ ಆದೇಶವನ್ನು ನೀಡಿದೆ. ಪಶ್ಚಿಮ ಬಂಗಾಳ ಸರ್ಕಾರವು ಮೂರು ತಿಂಗಳೊಳಗೆ ಈ ಪಾವತಿಯನ್ನು ಮಾಡಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಅಲ್ಲದೆ, ಈ ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್‌ನಲ್ಲಿ ನಡೆಯಲಿದೆ.