ಹಾವೇರಿ : ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿಯಾದ್ರೆ ಸರ್ಕಾರ ಪತನವಾಗಲಿದೆ ಎಂದು ಹಾವೇರಿಯಲ್ಲಿ ರಂಭಾಪುರಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಜಾರಿಯಾದ್ರೆ ಸರ್ಕಾರ ಪತನವಾಗುತ್ತೆ ಅಂತ ಕಾಂಗ್ರೆಸ್ ನಾಯಕರೇ ಹೇಳ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಜಾತಿಗಣವತಿ ವರದಿ ಪಾರದರ್ಶವಕಾಗಿ ಆಗಿಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಹೀಗಾಗಿ ಜಾತಿಗಣತಿ ವರದಿ ಜಾರಿಯಾಗಬಾರದು ಎಂದು ಹೇಳಿದ್ದಾರೆ.
ಜಾತಿಗಣತಿ ವರದಿ ಬಗ್ಗೆ ವಿವಿಧ ಸಮುದಾಯಗಳ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದ್ದು, ನಾಳಿನ ಸಭೆಯಲ್ಲಿ ಜಾತಿಗಣತಿ ವರದಿ ಕುರಿತ ನಿರ್ಧಾರ ಮಹತ್ವ ಪಡೆದುಕೊಂಡಿದೆ.