ಬೆಂಗಳೂರು : ಪಹಲ್ಗಾಮ್ ಉಗ್ರ ದಾಳಿಯಲ್ಲಿ ಬಲಿಯಾದ ರಾಜ್ಯದ ಭರತ್ ಭೂಷಣ್ ಹಾಗೂ ಮಂಜುನಾಥ್ ಅಂತ್ಯಕ್ರಿಯೆಗೆ ಸರ್ಕಾರದಿಂದ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆಯುತ್ತಿರುವ, ಭರತ್ ನಿವಾಸದ ಸುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದಕರ ದಾಳಿಯಲ್ಲಿ ಭರತ್ ಭೂಷಣ್, ಮಂಜುನಾಥ್ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡುತ್ತೇವೆ. ಅಂತ್ಯಕ್ರಿಯೆಗೆ ಸರ್ಕಾರದಿಂದಲೇ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಭರತ್ ಅಂತ್ಯಕ್ರಿಯೆ ವ್ಯವಸ್ಥೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ನೋಡಿಕೊಳ್ಳಲಿದ್ದಾರೆ. ಶಿವಮೊಗ್ಗದಲ್ಲಿ ಮಂಜುನಾಥ್ ಅಂತ್ಯಕ್ರಿಯೆಯನ್ನು ಸಚಿವ ಮಧು ಬಂಗಾರಪ್ಪ ನೋಡಿಕೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಪಹಲ್ಗಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ನಿವಾಸಿ ಭರತ್ ಭೂಷಣ್ ಅವರ ಅಂತಿಮ ವಿಧಿವಿಧಾನಗಳನ್ನು ಇಂದು ನಡೆಸಲಾಗುತ್ತಿದೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.