ಮೈಸೂರು : ಕನ್ನಡದ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಸೆ.24 ರಂದು ನಿಧನರಾಗಿದ್ದು, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಸಲಾಗಿದೆ.
ಇಂದು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ಆರಂಭವಾಗಿದೆ. ಇದೀಗ ಎಸ್.ಎಲ್.ಭೈರಪ್ಪಗೆ ಸರ್ಕಾರಿ ಗೌರವ ಸಲ್ಲಿಸಲಾಗಿದೆ. ಅಂತ್ಯಕ್ರಿಯೆಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಹೆಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಸಚಿವರು, ಶಾಸಕರು ಭಾಗಿಯಾಗಿದ್ದಾರೆ.
ಡಾ.ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರ ಗುರುವಾರ ಮೈಸೂರಿಗೆ ತರಲಾಗಿತ್ತು. ನಗರದ ಕಲಾ ಮಂದಿರ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇಂದುಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ಸಲಾಗುತ್ತದೆ.