ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಕರಡು ಪ್ರತಿಯನ್ನು ಇತ್ತೀಚಿಗೆ ರಾಜ್ಯಪಾಲರಿಗೆ ಕಳುಹಿಸಿದ್ದು, ಇದೀಗ ರಾಜ್ಯಪಾಲ ಥಾವರ ಚಂದ್ ಗೆಹ್ಲೊಟ್ ಈ ಒಂದು ಸುಗ್ರೀವಾಜ್ಞೆ ಪ್ರತಿಗೆ ಅಂಕಿತ ಹಾಕುವ ಮೂಲಕ ಸುಗ್ರೀವಾಜ್ಞೆ ಜಾರಿಗೆ ಅನುಮೋದನೆ ನೀಡಿದ್ದಾರೆ.
ಹೌದು ಹಲವು ಸಲಹೆಗಳನ್ನು ನೀಡಿ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಸುಗ್ರೀವಾಜ್ಞೆ ಜಾರಿಗೆ ಕುರಿತಂತೆ ಹಲವು ಸೂಚನೆಗಳನ್ನು ನೀಡಿರುವ ರಾಜ್ಯಪಾಲರು, ಈ ವಿಷಯದ ಕುರಿತು ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿ ಆಗಿದ್ದು ಈ ಒಂದು ಸುಗ್ರೀವಾಜ್ಞೆಗೆ ರಾಜ್ಯಪಾಲರು ಇದೀಗ ಅಂಕಿತ ಹಾಕಿದ್ದಾರೆ. ಹಾಗಾಗಿ ಮೈಕ್ರೋ ಫೈನಾನ್ಸ್ ಮಾಲೀಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.