ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ. ಈ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ನಡುವೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು ಮಧ್ಯಾಹ್ನ 1.15 ಕ್ಕೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಮಹತ್ವದ ಮಾಹಿತಿ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.