ಬೆಂಗಳೂರು: ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಸಚಿವರು ಆಗಮಿಸುತ್ತಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವ ಜಮೀರ್ ಅಹ್ಮದ್ ಖಾನ್, ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಸಚಿವರು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ್ದಾರೆ.
ಬಳಿಕ ಇಂದು ಸಚಿವರು, ಶಾಸಕರು ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಲಿದ್ದು, ರಾಜಭವನ ಚಲೋ ಗೆ ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ.