ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ ವಿಚಾರವಾಗಿ ಇಂದು ಮೈಸೂರು ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿದ್ದಾರೆ. ಇದಕ್ಕೆಲ್ಲ ನಾನು ಹೆದರುವುದಿಲ್ಲ ಎಲ್ಲಾ ಎದುರಿಸುತ್ತೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯಪಾಲರ ಶೋಕಾಸ್ ನೋಟಿಸ್ ಗೆ ಸಿಎಂ ಗರಂ ಆಗಿದ್ದು, ಇದಕ್ಕೆಲ್ಲ ನಾನು ಹೆದರುವುದಿಲ್ಲ. ಎಲ್ಲವನ್ನು ಎದುರಿಸುತ್ತೇನೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಯಾವುದನ್ನೂ ಪರಿಶೀಲಿಸದೆ ಆತುರಾತುರವಾಗಿ ನೋಟಿಸ್ ಕೊಟ್ಟಿದ್ದಾರೆ ಎಂದರು.
ಕೇಂದ್ರ ಸರ್ಕಾರ ರಾಜಭವನವನ್ನು ಈ ಮೂಲಕ ದುರ್ಬಳಕೆ ಮಾಡಿಕೊಳ್ಳುತ್ತಿದೆ.ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಪ್ರಜಾಪ್ರಭುತ್ವ ಸಂವಿಧಾನ ಕೊಲೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ, 136 ಶಾಸಕರ ಬೆಂಬಲದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ. ಪ್ರಜಾಪ್ರಭುತ್ವ ಸಂವಿಧಾನ ಕೊಲೆ ಮಾಡಲು ಪ್ರಯತ್ನ ಮಾಡಲಾಗುತ್ತಿದೆ.ಮುಡಾ ಹಗರಣದಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹೆದರಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಆರ್ ಅಶೋಕ ಹೆದರಿಕೊಂಡಿರಬೇಕು. ನಾನು ತಪ್ಪೇ ಮಾಡಿಲ್ಲ ನನಗ್ಯಾಕೆ ಹೆದರಿಕೊಳ್ಳಲಿ. ತಪ್ಪು ಮಾಡಿದರೆ ತಾನೇ ನಾನು ಹೆದರ್ಕೋಬೇಕು ನಾನು ತಪ್ಪೇ ಮಾಡಿಲ್ವಲ್ಲ? ಕಾನೂನು ರೀತಿಯಲ್ಲಿ ರಾಜ್ಯಪಾಲರು ಮಾಡಿಲ್ಲ. ತಪ್ಪು ಮಾಡಿದ್ರೆ ನಾನು ಹೆದರಿಕೊಳ್ಳಬೇಕು ಎಂದರು.
ಅಬ್ರಾಹಂ ಒಬ್ಬ ಬ್ಲಾಕ್ ಮೇಲರ್ ಅವನ ದೂರಿನ ಮೇಲೆ ನೀವು ಕ್ರಮ ತೆಗೆದುಕೊಳ್ಳುತ್ತೀರಾ. ಅನೇಕ ಆತ ಜನರ ವಿರುದ್ಧ ಇದೇ ರೀತಿ ದೂರು ಕೊಟ್ಟಿದ್ದಾನೆ. ಈ ಕ್ರಮವೇ ಕಾನೂನು ಬಾಹಿರ. ಆದರೆ ನಾನು ಯಾವುದೇ ಅಪರಾಧವನ್ನು ಮಾಡಿಲ್ಲ ಜುಲೈ 26ಕ್ಕೆ ಬೆಳಿಗ್ಗೆ 11:30 ಕ್ಕೆ ದೂರು ಕೊಟ್ಟಿದ್ದಾನೆ. ದೂರಿನ ಪRAಮರ್ಶೆ ಮಾಡದೆ ಸಂಜೆ ನೋಟಿಸ್ ಕೊಟ್ಟಿದ್ದಾರೆ. ನೋಟಿಸ್ ಕೊಟ್ಟಿರೋದು ಕಾನೂನು ಬಾಹಿರ ದೂರುದಾರ ಅಬ್ರಹಾಂ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.