ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖಗೆ ಪ್ರಾಶಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರಿಗೆ `Z’ ಕೆಟಗರಿ ಸೆಕ್ಯೂರಿಟ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಝಡ್ ಕೆಟಗರಿ ಸೆಕ್ಯೂರಿಟಿ ನೀಡಲಾಗಿದೆ. ಬುಲೆಟ್ ಫ್ರೂಫ್ ಕಾರುನ್ನೂ ಸಹ ನೀಡಲಾಗಿದೆ.
ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ವಹಿಸಿದ್ದು, ಆಗಸ್ಟ್ 29 ರವರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಭಾಗಿಯಾಗಲಿದ್ದ ಕಾರ್ಯಕ್ರಮಗಳನ್ನು ರಾಜಭವನ ಮುಂದೂಡಿದೆ.
ಮುಡಾ ಹಗರಣದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲಾಗಿದೆ. ಇದರ ಬೆನ್ನಲ್ಲಿಯೇ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.