ಬೆಂಗಳೂರು : ಇಂದು ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದರು. ಈ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ 5 ಪ್ರಮುಖ ಗ್ಯಾರಂಟಿಗಳನ್ನು ಇದೆ ವೇಳೆ ಹಾಡಿ ಹೊಗಳಿದರು.
ಇಂದು ದೇಶಕ್ಕೆ ಐತಿಹಾಸಿಕ ದಿನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಗ್ಯಾರಂಟಿಗಳ ಮೂಲಕ ದೇಶದಲ್ಲಿ ಹೊಸ ಸಂದೇಶ ನೀಡಿದೆ. ಗ್ಯಾರಂಟಿಗಳನ್ನು ಟೀಕೆ ಮಾಡುವವರಿಗೆ ತಕ್ಕ ಸಂದೇಶವನ್ನು ನೀಡಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆ ಅಡಿಯಲ್ಲಿ ಪ್ರತಿಮೆಗಳಿಗೆ ತಿಂಗಳಿಗೆ 2000 ಹಣ ನೀಡಲಾಗುತ್ತಿದೆ. ಕೋಟ್ಯಾಂತರ ಮಹಿಳೆಯರು ಈ ಒಂದು ಯೋಜನೆಯ ಲಾಭ ಪಡೆದಿದ್ದಾರೆ ಎಂದು ತಿಳಿಸಿದರು.
ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ 35,180 ಕೋಟಿ ಮೀಸಲಿಟ್ಟಿದ್ದೇವೆ. ಅಷ್ಟೇ ಅಲ್ಲದೆ ಗೃಹಜೋತಿ ಯೋಜನೆ ಜಾರಿ ಮಾಡಿದ್ದೇವೆ.ರಾಜ್ಯದ 1.62 ಕೋಟಿ ಜನ ಇದರ ಲಾಭ ಪಡೆಯುತ್ತಿದ್ದಾರೆ. ಅಲ್ಲದೆ ಶಕ್ತಿ ಯೋಜನೆ ಮತ್ತು ಯುವ ನಿಧಿ ಯೋಜನೆ ಕೂಡ ಜಾರಿ ಮಾಡಲಾಗಿದ್ದು, ಅನೇಕ ಮಹಿಳೆಯರು ಹಾಗೂ ಯುವ ಜನತೆ ಇವನು ಯೋಜನೆಯ ಲಾಭವನ್ನು ಪಡೆದುಕೊಂಡಿದ್ದಾರೆ.
ಕಾನೂನಿನ ಮುಂದೆ ಎಲ್ಲರೂ ಒಂದೇ ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ. ಜನರ ಹಸಿವು ನೀಗಿಸಲು ಅನ್ನ ಭಾಗ್ಯ ಯೋಜನೆಯನ್ನು ಜಾರಿ ಮಾಡಲಾಗಿದೆ 5 ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತಿದೆ. 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಸದಸ್ಯರಿಗೆ 170 ಹಣ ವರ್ಗಾವಣೆ ಮಾಡಲಾಗಿದ್ದು ಒಟ್ಟು ನಾಲ್ಕು ಕೋಟಿ 48 ಲಕ್ಷ ಫಲಾನುಭವಿಗಳಿಗೆ ಹಣ ಸಂದಾಯ ಮಾಡಲಾಗಿದೆ ಡಿವಿಟಿ ಮೂಲಕ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಸಲಾಗಿದೆ ಎಂದು ತಿಳಿಸಿದರು.