ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸೌಧಕ್ಕೆ ವಿಶೇಷ ಅಧಿವೇಶನಕ್ಕೆ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ.
ಸಂವಿಧಾನದ ವಿಧಿ 176.1 ರ ಅನ್ವಯ ಜಂಟಿ ಅಧಿವೇಶನಕ್ಕೆ ಬರಲು ರಾಜ್ಯಪಾಲರು ಒಪ್ಪಿದ್ದು, ಇದೀಗ ವಿಧಾನಸೌಧಕ್ಕೆ ಆಗಮಿಸಿದ್ದು, ಬಳಿಕ ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ರಾಜ್ಯ ಸರ್ಕಾರ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ ಅಧಿವೇಶನ ಇದಾಗಿದೆ. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿವೇಶನದಲ್ಲಿ ಭಾಷಣ ಮಾಡಲು ನಿರಾಕರಿಸಿದ್ದು, ಈ ನಡುವೆ ಥಾವರ್ ಚಂದ್ ಅಧಿವೇಶನಕ್ಕೆ ಆಗಮಿಸಿದ್ದಾರೆ.








