ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರ ಕಚೇರಿಯಿಂದ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಕಚೇರಿಯಿಂದ ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ಬಂದಿದೆ. ತಪ್ಪು ಗ್ರಹಿಕೆಯಿಂದ ಶೋಕಾಸ್ ನೋಟಿಸ್ ನೀಡಲಾಗಿದೆ. ಹೀಗಾಗಿ ಸಚಿವ ಸಂಪುಟ ಸಭೆಗೆ ನಾನು ನಡೆಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಸೂಚಿಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ನೀಡಿರುವ ಶೋಕಾಸ್ ನೋಟಸ್ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಸುತ್ತೇವೆ. ಮುಂದಿನ ಕಾನೂನು ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.