ಬೆಂಗಳೂರು : ಬಹು ಮುಖ್ಯವಾದಂತಹ ಜಾತಿಗಣತಿ ವರದಿ ಜಾರಿ ಮಾಡುವ ಕುರಿತಂತೆ ಮುಂದಿನ ಸಂಪುಟ ಸಭೆಯಲ್ಲಿ ಅಂದರೆ ಜನೆವರಿ 16 ರಂದು ಈ ಒಂದು ಜಾದಿಗಣತಿ ವರದಿ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದು, ಬಹುತೇಕ ಮುಂದೆ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರೊಂದಿಗೆ ಚರ್ಚಿಸಿ ಜಾತಿಗಣತಿ ವರದಿ ಜಾರಿಯಾಗುವ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಹೌದು ಮುಂದಿನ ಕ್ಯಾಬಿನೆಟ್ ನಲ್ಲಿ ಜಾತಿಗಣತಿ ವರದಿ ಜಾರಿ ಕುರಿತು ಚರ್ಚೆ ಸಾಧ್ಯತೆ ಇದ್ದು, ಸಚಿವ ಸಂಪುಟದ ಮುಂದೆ ವರದಿ ಮಂಡಿಸಲು ಸೂಚನೆ ನೀಡಲಾಗಿದೆ. ಸಚಿವರೊಂದಿಗೆ ಚರ್ಚೆ ಮಾಡಲು ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ.ಕಾನೂನು ಇಲಾಖೆ ಸಲಹೆ ಪಡೆಯಲು ಬಹುತೇಕ ತೀರ್ಮಾನಿಸಲಾಗಿದ್ದು, ಸಚಿವ ಸಂಪುಟ ಸಮಿತಿ ರಚನೆ ಮಾಡುವ ಸಾಧ್ಯತೆ ಇದೆ.
ಈಗಾಗಲೇ ಜಯಪ್ರಕಾಶ್ ಹೆಗಡೆಯವರು ಜಾತಿಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಸಂಪುಟ ಉಪ ಸಮಿತಿ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. ಸಿಎಂ ಸಿದ್ದರಾಮಯ್ಯ ಚರ್ಚೆ ಮಾಡಿ, ಸಂಪುಟ ಉಪ ಸಮಿತಿ ರಚನೆ ಮಾಡಿ, ಜಾತಿಗಣತಿ ವರದಿ ಜಾರಿಯಾಗುವ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.