ಮೈಸೂರು : ಮುರೂ ವರ್ಷಗಳ ಪದವಿ ವಿದ್ಯಾರ್ಥಿಗಳಿಗೆ ಅಂತಿಮ ವರ್ಷ ಕೌಶಲ್ಯಾಧಾರಿತ ವಿಷಯಗಳ ತರಬೇತಿ ನೀಡಲು ವಿದ್ಯಾರ್ಥಿಗಳಿಗೆ ಇಂಟರ್ನಶಿಪ್ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ತಿಳಿಸಿದರು.
ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಇಂದಿನಿಂದ 1,000 ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ!
ನಿನ್ನೆ ಮೈಸೂರಿನ ವಿಶ್ವವಿದ್ಯಾಲಯದಲ್ಲಿ 114ನೇ ಘಟಕ ಉತ್ಸವದಲ್ಲಿ ಮಾತನಾಡಿದ ಅವರು, ಈ ವಿಷಯದ ಕುರಿತಾಗಿ ಕೇಂದ್ರ ಮತ್ತು ರಾಜ್ಯ ಶಿಕ್ಷಣ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಐಎಎಸ್ ಅಧಿಕಾರಿಗಳ ತಂಡ ಸ್ಥಾಪನೆ ಮಾಡಿಕೊಂಡಿರುವ ಕ್ರಿಸ್ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲಾಗಿದೆ. ಎಇಡಿಪಿ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಮಾಸಿಕ 11 ಸಾವಿರದಿಂದ 12 ಸಾವಿರದವರೆಗೆ ಭತ್ಯೆ ನೀಡಲಾಗುತ್ತದೆ.
‘ಮೋದಿ’ ಹಿಂದುವಲ್ಲ: ತಾಯಿಯ ಸಾವಿನ ನಂತರ ತಲೆ ಬೋಳಿಸಿಕೊಂಡಿಲ್ಲ ‘ಲಾಲು ಯಾದವ್’ ವಿವಾದಾತ್ಮಕ ಹೇಳಿಕೆ
ಉನ್ನತ ಶಿಕ್ಷಣದಲ್ಲಿ ಬದಲಾವಣೆ ನಮ್ಮ ಸರ್ಕಾರ ಯೋಜನೆ ರೂಪಿಸಿದೆ. ಈ ಕುರಿತಂತೆ ಅಮೆರಿಕದ ಒಂದು ಸಂಸ್ಥೆಯೊಂದಿಗೆ ಮೂರು ಬಿಲಿಯನ್ ಒಡಂಬಡಿಕೆ ಮಾಡಿ ಕೊಂಡಿದೆ. ಈ ಒಂದು ಯೋಜನೆಯಲ್ಲಿ ಎಲ್ಲಾ ವಿಶ್ವವಿದ್ಯಾಲಯಗಳ ಬೋಧಕರು ಹಾಗೂ ವಿದ್ಯಾರ್ಥಿಗಳಿಗೆ ವೃತ್ತಿಪರ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.
‘ಸರ್ಕಾರಿ ನೌಕರ’ರಿಗೆ ಒಪಿಎಸ್ (OPS) ಜಾರಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’
ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಭಾಷೆಯಲ್ಲಿ ಪಾಂಡಿತ್ಯ ಪಡೆದುಕೊಳ್ಳಲು ತರಬೇತಿ ನೀಡಲಾಗುತ್ತದೆ. ಮೊದಲು ಬೆಂಗಳೂರಿನ ಆರ್ ಸಿ ಕಾಲೇಜಿನಲ್ಲಿ ಪ್ರಾರಂಭಿಸಲಾಗುತ್ತದೆ. ಅದಾದ ನಂತರ ಮೈಸೂರು ಹಾಗೂ ಮಂಗಳೂರು ವಿಶ್ವವಿದ್ಯಾಲಯಕ್ಕೂ ಈ ಯೋಜನೆಯನ್ನು ವಿಸ್ತರಿಸಲಾಗುತ್ತದೆ. ಸಾಧಕ ಬಾದಕಗಳನ್ನು ನೋಡಿ ಇತರೆ ವಿಶ್ವವಿದ್ಯಾಲಯಗಳಿಗೆ ವಿಸ್ತರಿಸಲಾಗುತ್ತದೆ ಎಂದು ತಿಳಿಸಿದರು.