ಗದಗ : ದುಷ್ಕರ್ಮಿಗಳು ಮನೆಗೆ ನುಗ್ಗಿ, ರೊಟ್ಟಿ ಮಾಡುವ ಕಟ್ಟಿಗೆ ಕ್ವಾಮಣಿಗೆಯಿಂದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನವನಗರದಲ್ಲಿ ನಡೆದಿದೆ. ಇನ್ನು ಕೊಲೆಯಾದ ಮುಖ್ಯ ಶಿಕ್ಷಕಿಯನ್ನು ಅನ್ನಪೂರ್ಣ ರಾಠೋಡ್ (55) ಎಂದು ತಿಳಿದುಬಂದಿದೆ.ಇವರು ಗಜೇಂದ್ರಗಡ ತಾಲೂಕಿನ ರೋಣದ ಬಿಇಒ ಕಚೇರಿಯಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಹೌದು ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಮಾಧ್ಯಮಿಕ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿದ್ದ ಅನ್ನಪೂರ್ಣ ರಾಠೋಡ್ ಗ್ರಾಮದಲ್ಲಿ ಎಸ್ಡಿಎಮ್ ಸಿ ಸಮಿತಿ ಕೆಲವರ ಜೊತೆಗೆ ಭಿನ್ನಾಭಿಪ್ರಾಯದ ಕಾರಣದಿಂದಾಗಿ ರೋಣ ಬಿಇಒ ಕಚೇರಿಗೆ ವರ್ಗಾವಣೆ ಮಾಡಿಸಿಕೊಂಡಿದ್ದರು ಎಂದು ಕುಟಂಬಸ್ಥರು ಆರೋಪಿಸಿದ್ದಾರೆ. ಕೊಲೆಗೆ ಇದು ಕೂಡ ಕಾರಣ ಎಂದು ಅವರು ಹೇಳಿದ್ದಾರೆ.
ಮನೆಯಲ್ಲಿದ್ದ ಮುಖ್ಯ ಶಿಕ್ಷಕಿಯ ತಲೆಗೆ ದುಷ್ಕರ್ಮಿಗಳು ರೊಟ್ಟಿ ಮಾಡುವ ಕಟ್ಟಿಗೆಯ ಕ್ವಾಮಣಗಿಯಿಂದ ಹೊಡೆದು ಭೀಕರ ಕೊಲೆ ಮಾಡಲಾಗಿದ್ದು, ಇದನ್ನು ಕಂಡ ಗಜೇಂದ್ರಗಡ ನಿವಾಸಿಗಳು ಆತಂಕಗೊಂಡಿದ್ದಾರೆ. ಇನ್ನೂ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.