ಹಾಸನ : ಹಾಸನದಲ್ಲಿ ಘೋರವಾದ ಘಟನೆ ನಡೆದಿದ್ದು, ಟಿಪ್ಪರ್ ಹರಿದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಒಬ್ಬರು ಸ್ಥಳದಲ್ಲೇ ಉಸಿರು ಚೆಲ್ಲಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮೃತ ಗ್ರಾಂ ಪಂಚಾಯತಿ ಅಧ್ಯಕ್ಷೆಯನ್ನು ಮಲ್ಲಿಗೆಮ್ಮ (58) ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಹನಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಿಗೆಮ್ಮ ಟಿಪ್ಪರ್ ಹರಿದು ಸಾವನಪ್ಪಿದ್ದಾರೆ.
ಮಲ್ಲಿಗಮ್ಮ ಬ್ಯಾಂಕಿಗೆ ಹೋಗಿ ವಾಪಾಸ್ ನಡೆದುಕೊಂಡು ಬರುವಾಗ ಈ ಒಂದು ಘಟನೆ ಸಂಭವಿಸಿದೆ. ಹಿಂದಿನಿಂದ ವೇಗವಾಗಿ ಬಂದು KA56 8961 ನಂಬರಿನ ಲಾರಿ ಡಿಕ್ಕಿ ಹೊಡೆದಿದೆ. ಕೂಡಲೇ ಮಲ್ಲಿಗೆಮ್ಮ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಘಟನೆ ಕುರಿತು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.