ತುಮಕೂರು : ಗ್ರೇಟರ್ ತುಮಕೂರು ಮಾಡಲು ಸರ್ಕಾರಕ್ಕೆ ಪ್ರಸ್ತಾವನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು ಬೆಂಗಳೂರು ಮಾದರಿಯಲ್ಲಿ ತುಮಕೂರು ಪಾಲಿಕೆ ಬದಲಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗು ಗೃಹ ಸಚಿವ ಉಸ್ತುವಾರಿ ಸಚಿವ ಜಿ. ಪರಮೇಶ್ವರ್ ಈ ಕುರಿತು ಸುಳಿವು ನೀಡಿದ್ದಾರೆ.
ಈಗಾಗಲೇ ಬೆಂಗಳೂರಲ್ಲಿ ಬಿಬಿಎಂಪಿಯನ್ನು ಐದು ಮಹಾನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ ತುಮಕೂರಿನ ಹತ್ತಿರದ ವರೆಗೂ ಬೆಂಗಳೂರು ಬೆಳೆದಿದೆ ಅದೇ ರೀತಿಯಾಗಿ ಗ್ರೇಟರ್ ತುಮಕೂರು ಮಾಡಲು ಮುಂದಾಗಿದ್ದೇವೆ. ಸದ್ಯದಲ್ಲೇ ಈ ವಿಚಾರವಾಗಿ ತೀರ್ಮಾನ ಆಗಲಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರು ತುಮಕೂರಿನಲ್ಲಿ ತಿಳಿಸಿದರು.








