ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನ್ಯಾಯಾಲಯದ ಸಾಕ್ಷ್ಯ ಕೊಠಡಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಪೊಲೀಸ್ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
“ಬಾರಾಮುಲ್ಲಾ ಪಟ್ಟಣದ ನ್ಯಾಯಾಲಯದ ‘ಮಲ್ಖಾನಾ (ಸಾಕ್ಷ್ಯ ಕೊಠಡಿ)’ ಒಳಗೆ ಗುರುವಾರ ಗ್ರೆನೇಡ್ (ಪ್ರಕರಣದಲ್ಲಿ ಸಾಕ್ಷ್ಯವಾಗಿ ಸಂಗ್ರಹಿಸಲಾಗಿದೆ) ಸ್ಫೋಟಗೊಂಡಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಫೋಟದಲ್ಲಿ ಓರ್ವ ಪೊಲೀಸ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.