ಚಿತ್ರದುರ್ಗ : ಚಿತ್ರದುರ್ಗ ನಗರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬರು ನಗರದ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಚಿತ್ರದುರ್ಗ ನಗರದ ಅಂಬೇಡ್ಕರ್ ವೃತ್ತದಲ್ಲಿ ಏಕಾಏಕಿ ವ್ಯಕ್ತಿಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಬೆಂಕಿ ನಂದಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಕಿ ಹಚ್ಚಿಕೊಂಡ ವ್ಯಕ್ತಿಯನ್ನು ಗೋಪಿನಾಥ್ ಎಂದು ಗುರುತಿಸಲಾಗಿದ್ದು, ಮಾನಸಿಕ ಅಸ್ವಸ್ಥ ಎನ್ನಲಾಗಿದ್ದು, ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.