ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೃಷ್ಣಾಪುರ ಗ್ರಾಮದ ಜಯರಾಂ ಎಂಬುವವರ ಅಡಿಕೆ ತೋಟದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೃತರು ಮಧ್ಯಪ್ರದೇಶ ಮೂಲದ ಮೋಹಿತ್ (24) ಹಾಗೂ ಕತರ್ವ (38) ಎಂದು ಗುರುತಿಸಲಾಗಿದೆ.
ಜಯರಾಂ ಅವರ ಅಡಿಕೆ ತೋಟದಲ್ಲಿ ಕೆಲ ಶ್ರೀಗಂಧ ಮರಗಳ ಕಳ್ಳತನ ಮಾಡಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರೂ ಸಾವನ್ನಪ್ಪಿರುವ ಶಂಕಕೆ ವ್ಯಕ್ತವಾಗಿದೆ. ಅಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.