ಬೆಂಗಳೂರು : ಪಂಚೆ ಧರಿಸಿ ಬಂದಿದ್ದಕ್ಕೆ ಮಾಲ್ ಪ್ರವೇಶಕ್ಕೆ ನಿರ್ಬಂಧಿಸಿದ ಹಿನ್ನೆಲೆಯಲ್ಲಿ ರಾಜ್ಯದ ರೈತರಿಗೆ ಜಿಟಿ ಮಾಲ್ ಉಸ್ತುವಾರಿ ಸುರೇಶ್ ಅವರು ಕ್ಷಮೆ ಕೇಳಿದ್ದಾರೆ.
ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿ.ಟಿ ಮಾಲ್ಗೆ ಪಂಚೆ ಧರಿಸಿ ಬಂದಿದ್ದ ರೈತರೊಬ್ಬರನ್ನು ಒಳಗೆ ಬಿಡದೆ ಅವಮಾನ ಮಾಡಲಾಗಿತ್ತು. ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಜಿಟಿ ಮಾಲ್ ಉಸ್ತುವಾರಿ ಸುರೇಶ್ ರಾಜ್ಯದ ರೈತರ ಕ್ಷಮೆ ಕೇಳಿದ್ದಾರೆ. ನಮ್ಮಿಂದ ತಪ್ಪಾಗಿದೆ ಕ್ಷಮಿಸಿ, ಪ್ರವೇಶ ನಿರ್ಬಂಧಿಸಿದ ಸೆಕ್ಯೂರಿಟಯನ್ನು ವಜಾ ಮಾಡಿದ್ದೇವೆ. ನಾನು ರಾಜ್ಯದ ರೈತರಿಗೆ ಕ್ಷಮೆ ಕೇಳುತ್ತೇನೆ. ನಮ್ಮಲ್ಲಿ ಯಾವುದೇ ಡ್ರೆಸ್ ಕೋಡ್ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಹಾವೇರಿ ಮೂಲದ ನಾಗರಾಜ್ ಅವರ ತಂದೆ ಅರೇಮಲ್ಲಾಪುರ ಗ್ರಾಮದ ರೈತರು. ರೈತನಿಗೆ ಮಾಲ್ ಪ್ರವೇಶ ನಿರಾಕರಿಸಿದ ಆಡಳಿತ ಮಂಡಳಿ ವರ್ತನೆಗೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸುರೇಶ ರಾಜ್ಯದ ರೈತರ ಕ್ಷಮೆ ಕೇಳಿದ್ದಾರೆ.