ಕೊಪ್ಪಳ : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಅದರಲ್ಲಿ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆ ಬಹಳ ಪ್ರಮುಖವಾಗಿರುವ ಗ್ಯಾರೆಂಟಿ ಯೋಜನೆಗಳಾಗಿವೆ. ಇದೀಗ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಬಂದ್ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳಲ್ಲಿ ಅನರ್ಹ ಫಲಾನುಭವಿಗಳಿಗೂ ಯೋಜನೆಯ ಲಾಭಹೋಗುತ್ತಿದೆ. ಈ ಕುರಿತು ರಾಜ್ಯಾದ್ಯಂತ ತನಿಖೆ ಮಾಡಿಸಿ ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಲಾಭ ತಲುಪದಂತೆ ಕಡಿವಾಣ ಹಾಕಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.
ಒಂದು ವಿಧಾನಸಭಾ ಕ್ಷೇತ್ರಕ್ಕೆ ವರ್ಷಕ್ಕೆ ಗ್ಯಾರಂಟಿ ಯೋಜನೆಯಡಿ ಅಂದಾಜು 250 ಕೋಟಿ ಹಣ ನೀಡುತ್ತಿದ್ದು, ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿವೆ. ಆದರೆ, ಅರ್ಹ lಅಲ್ಲದವರಿಗೂ ಸಹ ಯೋಜನೆ ಲಾಭಸಿಗುತ್ತಿದೆ. ಈ ಬಗ್ಗೆ ರಾಜ್ಯಮಟ್ಟದಲ್ಲಿ ಅಧಿಕಾರಿಗಳ ತಂಡ ರಚಿಸಿ ತನಿಖೆ ಮಾಡಲು ಮುಖ್ಯಮಂತ್ರಿಗೆ ತಿಳಿಸಲಾಗುವುದು ಎಂದರು.
ಮನೆ ಬಾಡಿಗೆ ನೀಡಿದ್ದರೂ ಅವರಿಗೆ ಉಚಿತ ಗೃಹಜ್ಯೋತಿ ಯೋಜನೆ ದೊರೆಯುತ್ತಿದೆ. ಟ್ಯಾಕ್ಸ್, ಜಿಎಸ್‌ಟಿ ಹೊಂದಿದ ಕುಟುಂಬದ ಸದಸ್ಯರಿಗೂ ಗೃಹಲಕ್ಷ್ಮಿ ಹಣ ನೀಡುತ್ತಿದ್ದು, ಅನ್ನಭಾಗ್ಯದಲ್ಲಿ ಪಡಿತರ ಕಾರ್ಡ್‌ಗಳ ವ್ಯತ್ಯಾಸ ಗೋಚರಿಸಿದೆ. ಈ ಕುರಿತು ತನಿಖೆ ಮಾಡಿಸಲಾಗುವುದು ಎಂದು ಹೇಳಿದರು.